ದಕ್ಷಿಣ ಕನ್ನಡ: ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ವೇಳೆ ಯುವಕನಿಗೆ ಚೂರಿ ಇರಿದ ಘಟನೆ ನಡೆದಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ಸೆ. 3ರಂದು ಸಂಜೆ ನಡೆದಿದೆ.
ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್ (23) ಸಂತ್ರಸ್ಥ ಯುವಕ.
ಸಫ್ವಾನ್ ಅವರ ಕತ್ತು, ಕೈಗೆ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ. ಗಾಯಾಳುವನ್ನು ಬಜ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ಸ್ಥಳೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.
ಸಫ್ವಾನ್ ಗೆಳೆಯರೊಂದಿಗೆ ಆಟವಾಡಿ ಮನೆಗೆ ತೆರಳುತ್ತಿದ್ದ ವೇಳೆ ಚೂರಿ ಇರಿಯಲಾಗಿದೆ. ಸುರತ್ಕಲ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.