ಮಂಗಳೂರು: ಕರ್ನಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ.
ವಾದಿರಾಜ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಹೊಟ್ಟೆ ಹಾಗೂ ಕೊರಳಿಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮನೆಮಂದಿ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ವಾದಿರಾಜ್ ಅವರಿಗೆ ಪತ್ನಿ, ಹಾಗೂ ಇಬ್ಬರು ಮಕ್ಕಳಿದ್ದು. ಬೆಳಿಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದು ಪತ್ನಿ ಕೂಡಾ ಮನೆಯಲ್ಲಿ ಇರದ ವೇಳೆ ಆತ್ಮಹತ್ಯಗೆ ಯತ್ನಿಸಿದ್ದಾರೆ ಎಂದು ಹೇಳಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಸ್ಪಷ್ಟವಾಗಿಲ್ಲ.