Sunday, March 23, 2025

ಮಂಗಳೂರು: ಪಾದಚಾರಿ ಯುವತಿಯರ ಮೇಲೆ ಹರಿದ ಕಾರು; ಒಂದು ಸಾವು – ಪೊಲೀಸರಿಗೆ ಶರಣಾದ ಡ್ರೈವರ್

ಮಂಗಳೂರು: ನಗರದ ಲೇಡಿಹಿಲ್ ಬಳಿ ನಡೆದ ಭೀಕರ ಅಪಘಾತಕ್ಕೆ ಒರ್ವ ಯುವತಿ ಸಾವನ್ನಪ್ಪಿದ್ದು ಒರ್ವ ಬಾಲಕಿ ಸಹಿತ ನಾಲ್ವರು ಗಾಯಗೊಂಡಿದ್ದಾರೆ. ನಿರ್ಲಕ್ಷ್ಯತನದಿಂದ ಕಾರು ಚಲಾಯಿಸಿದ ಚಾಲಕ ಫುಟ್ ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಐವರು ಯುವತಿಯರ ಗುಂಪಿನ ಮೇಲೆ ವಾಹನ ಹರಿಸಿದ್ದಾನೆ.

ಅಪಘಾತದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುರತ್ಕಲ್ ಮೂಲದ ರೂಪಶ್ರೀ(23) ಎಂಬ ಯುವತಿ ಸಾವನ್ನಪ್ಪಿದ್ದಾರೆ. ರೂಪಶ್ರೀ ಕುದ್ರೋಳಿ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿದ್ದರೆಂದು ತಿಳಿದುಬಂದಿದೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿದೆ.

ಇಯಾನ್ ಕಾರ್ ಚಾಲಕ ಅತೀ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಕಾರಿನೊಂದಿಗೆ ಪರಾರಿಯಾದ ಕಾರು ಚಾಲಕ ಕಮಲೇಶ್ ಬಲದೇವ್ ಬಳಿಕ ತಂದೆಯ ಜೊತೆ ಠಾಣೆಗೆ ಬಂದು ಶರಣಾಗಿದ್ದಾನೆ. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

Latest Articles