ಮಂಗಳೂರು: ದೇವಸ್ಥಾನದ ಆವರಣದಲ್ಲಿ ಪ್ರದಕ್ಷಿಣೆ ಹಾಕುವಾಗ ಭಕ್ತರೊಬ್ಬರು ಹೃದಯಾಘಾತಕ್ಕೆ ಒಳಗಾದ ಘಟನೆ ಸುರತ್ಕಲ್ ನ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಮುಲ್ಕಿ ಮೂಲದ 52 ವರ್ಷದ ಕೃಷ್ಣ ಭಟ್ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ಇಂದು (ಸೆ.10 ರಂದು) ಬೆಳಗ್ಗೆ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ಕೃಷ್ಣಭಟ್ ಅವರು ನಡೆದುಕೊಂಡು ಬರುತ್ತಿರುವಾಗಲೇ ಹಠಾತ್ ಹೃದಯಾಘಾತ ಸಂಭವಿಸಿದೆ.
ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಕೃಷ್ಣ ಭಟ್ ಕುಸಿದು ಬಿದ್ದ ದೃಶ್ಯ ಸೆರೆಯಾಗಿದೆ. ದೇವಸ್ಥಾನ ಆವರಣದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಇತರೇ ಭಕ್ತರು ಅವರ ರಕ್ಷಣೆಗೆ ಬಂದು ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಆ ವೇಳೆಗೆ ಕೃಷ್ಣಭಟ್ ಕೊನೆಯುಸಿರೆಳೆದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.