ಮಂಗಳೂರು: ರಾಜ್ಯಪಾಲರ ವಿರುದ್ಧ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ.
ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ನಗರದ ವೆಲೆನ್ಸಿಯಾದಲ್ಲಿ ಐವಾನ್ ಡಿಸೋಜರ ಮನೆಯಿದ್ದು, ರಾತ್ರಿ ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ.
ಐವನ್‌ರ ಮನೆಯ ಕಿಟಕಿಯ ಫ್ರೇಮ್‌ಗೆ ಕಲ್ಲು ಬಿದ್ದಿದ್ದು, ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಲಾಗಿದೆ.
ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ಐವನ್ ಡಿಸೋಜಾ ಎಡವಟ್ಟೊಂದನ್ನ ಮಾಡಿಕೊಂಡಿದ್ದರು. ತಮ್ಮ ಮಾತಿನಿಂದಲೇ ಸಮಸ್ಯೆಯನ್ನು ಮೈ ಮೇಲೆ ಎಳೆದುಕೊಂಡಿದ್ದರು. ರಾಜ್ಯಪಾಲರನ್ನ ರಾಷ್ಟ್ರಪತಿ ಹಿಂದಕ್ಕೆ ಕರೆಸಿಕೊಳ್ಳದಿದ್ರೆ ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ಬರುತ್ತೆ ಎಂದಿದ್ದರು.