ಮಂಗಳೂರು: ಚಿಕಿತ್ಸೆಗೆಂದು ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಪರಿಚಯಸ್ಥನ ಯುವಕನೇ ಆಸ್ಪತ್ರೆಯಲ್ಲಿ ನಿರಂತರ ಅತ್ಯಾಚಾರ ಎಸಗಿದ ಘಟನೆಗೆ ಸಂಬಂಧಿಸಿ ಕೇರಳದ ಅಂಬಲತ್ತರ ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಹೊಸದುರ್ಗ ಪುಲ್ಲೂರು ಗ್ರಾಮದ ಸುಜಿತ್ ಬಂಧಿತ ಆರೋಪಿ.
ಆರೋಪಿ ಸಜಿತ್ ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೈಲ್ಸ್ ಗೆ ಚಿಕಿತ್ಸೆಗೆ ಯುವತಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ ಸಜಿತ್, ಚಿಕಿತ್ಸೆಯ ಬಳಿಕ ಆಸ್ಪತ್ರೆಯ ಕೊಠಡಿಯಲ್ಲಿದ್ದ ವೇಳೆ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಆಕೆಯ ನಗ್ನ ಫೋಟೋಗಳನ್ನ ತೆಗೆದಿದ್ದು, ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆ ಬಳಿಕ ನಗ್ನ ಫೋಟೋ ಇದೆ ಎಂದು ಬೆದರಿಸಿ, ಆಕೆಯನ್ನು ಮಂಗಳೂರಿನ ಖಾಸಗಿ ಹೋಟೇಲ್ ಗೆ ಕರೆಸಿಕೊಂಡು ಅಲ್ಲಿನ ಕೊಠಡಿಯಲ್ಲಿ ಅತ್ಯಾಚಾರ ನಡೆಸಿದ್ದಾನೆ. ಅದಾದ ಬಳಿಕ ಯುವತಿ ಫುಡ್ ಫಾಯಿಸನ್ ಆಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದಾಗ ಅಲ್ಲೂ ಕೊಠಡಿಯಲ್ಲಿ ಅತ್ಯಾಚಾರ ಮಾಡಿದ್ದಾನೆಂದು ಯುವತಿ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ, ಇದರಿಂದ ನೊಂದ ಸಂತ್ರಸ್ತೆ ಪೊಲೀಸ್ ರಾಣೆ ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ ೩೭೬, ೫೦೬,೧೪೯ ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಕದ್ರಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಪ್ರಕರಣದ ಆರೋಪಿಯನ್ನು ನ್ಯಾಯಾಲಕ್ಕೆ ಹಾಜರುಪಡಿಸಲಾಗಿದೆ.