ಮಂಗಳೂರು: ಬಿಜೈ ನ್ಯೂರೋಡ್‌ನ ಸಂಕೈಗುಡ್ಡದ ಮನೆಯೊಂದರಿಂದ ಸುಮಾರು 30 ಲಕ್ಷ ರೂ. ಮೌಲ್ಯದ ಚಿನ್ನದ ಒಡವೆಗಳನ್ನು ಕಳವು ಮಾಡಿರುವ ಕುರಿತಂತೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.24ರ ರಾತ್ರಿ 11.30ರಿಂದ ನ.25ರ ಬೆಳಗ್ಗೆ 6 ಗಂಟೆಯ ನಡುವೆ ಮನೆಗೆ ಪ್ರವೇಶಿಸಿದ ಕಳ್ಳರು ಬೆಡ್‌ರೂಂನ ಕಿಟಕಿಯ ಗ್ರಿಲ್ಸ್‌ನ್ನು ಯಾವುದೋ ಆಯುಧದಿಂದ ತುಂಡರಿಸಿ ಒಳಗೆ ಪ್ರವೇಶಿಸಿದ್ದಾರೆ.
ಬಳಿಕ ಬೆಡ್‌ರೂಂ ಕಪಾಟಿನಲ್ಲಿದ್ದ ಅಂದಾಜು 16 ಗ್ರಾಂ ತೂಕದ ಒಂದು ಜತೆ ಕಿವಿಯ ಓಲೆ, 144 ಗ್ರಾಂ ತೂಕದ 4 ಚಿನ್ನದ ನೆಕ್ಲೆಸ್, 40 ಗ್ರಾಂ ತೂಕದ ಚಿನ್ನದ ಸರ, 48 ಗ್ರಾಂ ತೂಕದ ಚಿನ್ನದ ಹಾರ, 24 ಗ್ರಾಂ ತೂಕದ ಹವಳದ ಸರ, 40 ಗ್ರಾಂ ತೂಕದ ಚಿನ್ನದ ಸರ ಮತ್ತು 36 ಗ್ರಾಂ ತೂಕದ ಚಿನ್ನದ ನೆಕ್ಲೆಸ್ ಕದ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.