Saturday, January 25, 2025

ಉಗ್ರ ಹಮಾಸ್ ಬೆಂಬಲಿಸಿ ವಿಡಿಯೋ ಮಾಡಿದ ವ್ತಕ್ತಿಯ ಬಂಧನ

ಮಂಗಳೂರು: ಇಸ್ರೇಲ್ ಮೇಲೆ ದಾಳಿ ನಡೆಸಿದ ಉಗ್ರ ಸಂಘಟನೆ ಹಮಾಸ್ ಪರ ವಿಡಿಯೋ ಮಾಡಿ ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟಿದ್ದ ತೋಕೂರು, ಜೋಕಟ್ಟೆಯ ಝಾಕಿರ್ (58 )ಎಂಬಾತನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಝಾಕಿರ್ ವಿಡಿಯೋ ಕುರಿತು ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಉಪನಿರೀಕ್ಷರಾದ ವಿನಾಯಕ್ ತೊರಗಲ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ಝಾಕಿರ್ ನನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ವಿಚಿತ್ರ ಉಡುಗೆ ತೊಟ್ಟ ಝಾಕಿರ್ ಮೇಲೆ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Latest Articles