Monday, December 9, 2024

ಮಥುರಾದಲ್ಲಿ ಕೃಷ್ಣ ದೇವಸ್ಥಾನ ಕೆಡವಿ ಮಸೀದಿ ನಿರ್ಮಾಣ – ಭಾರತೀಯ ಪುರಾತತ್ವ ಇಲಾಖೆ

ಮಥುರಾದಲ್ಲಿ ಕೃಷ್ಣ ದೇವಸ್ಥಾನವನ್ನು ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಪ್ರದೇಶದ ಮೈನ್‌ಪುರಿ ನಿವಾಸಿ ಅಜಯ್ ಪ್ರತಾಪ್ ಸಿಂಗ್ ಅವರು ಮಾಹಿತಿ ಹಕ್ಕು ಕಾಯ್ದೆ (RTI) ಅಡಿ ಕೇಳಿದ ಪ್ರಶ್ನೆಗೆ ಎಎಸ್‌ಐ ಉತ್ತರ ನೀಡಿದೆ.

ಪ್ರಶ್ನೆ ಏನಿತ್ತು?
1670ರಲ್ಲಿ ಕೇಶವದೇವ ದೇವಸ್ಥಾನವನ್ನು ಕೆಡವಿ ಶಾಹಿ ಈದ್ಗಾ ನಿರ್ಮಾಣವಾದ ಬಗ್ಗೆ 1920ರ ನವೆಂಬರ್‌ನಲ್ಲಿ ಬ್ರಿಟಿಷರು ನಡೆಸಿದ ಸರ್ವೆ ಮಾಹಿತಿ ನೀಡುವಂತೆ ಪ್ರಶ್ನೆ ಕೇಳಲಾಗಿತ್ತು.

1920 ರಲ್ಲಿ ಅಲಹಾಬಾದ್‌ನಿಂದ ಬ್ರಿಟಿಷರು ಪ್ರಕಟಿಸಿದ ಗೆಜೆಟ್‌ನಲ್ಲಿ (ರಾಜ್ಯಪತ್ರ) ಲೋಕೋಪಯೋಗಿ ಇಲಾಖೆಯು ಉತ್ತರ ಪ್ರದೇಶದ (Uttar Pradesh) ವಿವಿಧೆಡೆ 39 ಸ್ಮಾರಕಗಳ ಪಟ್ಟಿಯನ್ನು ನೀಡಿದೆ. ಈ ಪಟ್ಟಿಯಲ್ಲಿ ಕತ್ರಾ ಕೇಶವ ದೇವ್ ಭೂಮಿಯಲ್ಲಿರುವ ಶ್ರೀ ಕೃಷ್ಣ ಭೂಮಿಯನ್ನು 37ನೇ ಸ್ಥಾನದಲ್ಲಿ ಉಲ್ಲೇಖಿಸಲಾಗಿದೆ. ಹಿಂದೆ ಕತ್ರಾ ದಿಬ್ಬದ ಮೇಲೆ ಕೇಶವದೇವ್‌ ದೇವಸ್ಥಾನವಿತ್ತು. ಅದನ್ನು ಕೆಡವಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಉತ್ತರ ನೀಡಿದೆ.

Related Articles

Latest Articles