Saturday, January 25, 2025

ನಿಗೂಢವಾಗಿ ನಾಪತ್ತೆಯಾಗಿದ್ದ ವಕೀಲನ ಮೃತದೇಹ ಪತ್ತೆ – ಕೊಲೆ ಶಂಕೆ

ಬಾಗಲಕೋಟೆ: ಕೆಲವು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವಕೀಲರೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬೀಳಗಿ ಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಕೀಲ ಗಿರೀಶ್ ಕಾಡಣ್ಣವರ್ (38) ಅಕ್ಟೋಬರ್ 15ರಂದು ಮನೆಯಿಂದ ನಾಪತ್ತೆಯಾಗಿದ್ದರು.

ಇದೀಗ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದೇಹದ ಹಲವು ಭಾಗಗಳಲ್ಲಿ ಗಾಯಗಳಿವೆ.
ಅವರನ್ನು ಯಾರೋ ದುಷ್ಕರ್ಮಿಗಳು ಅಪಹರಿಸಿ ಹತ್ಯೆಗೈದಿದ್ದಾರೆ ಎನ್ನಲಾಗಿದೆ.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ತುಂಬರಮಟ್ಟಿ ಗ್ರಾಮದ ನಿವಾಸಿಯಾಗಿರುವ ಗಿರೀಶ್ ಶವ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಅವರನ್ನು ತಲೆ ಹಾಗೂ ದೇಹದ ಭಾಗದ ಮೇಲೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಘಟನೆಗೆ ಸೂಕ್ತ ಕಾರಣ ತಿಳಿದುಬಂದಿಲ್ಲ.

Related Articles

Latest Articles