ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಐದಾರು ಅನ್ಯಕೋಮಿನ ಯುವಕರು ಮೊಬೈಲ್ ಶಾಪ್‌ನ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ.
ಮುಖೇಶ್, ಹಲ್ಲೆಗೊಳಗಾಗಿರುವ ಯುವಕ. ‘ವರ್ಧಮಾನ್ ಟೆಲಿಕಾಮ್’ ಎಂಬ ಮೊಬೈಲ್ ಶಾಪ್ ನಡೆಸುತ್ತಿದ್ದ ಮುಖೇಶ್, ಸಂಜೆ ಸಮಯ ಮೊಬೈಲ್ ಶಾಪ್‌ನಲ್ಲಿ ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಾರೆ. ಈ ವೇಳೆ ಅಂಗಡಿಗೆ ಬಂದಿದ್ದ ನಾಲ್ಕೈದು ಅನ್ಯಧರ್ಮೀಯ ಯುವಕರು, ಸಂಜೆ ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕ್ತೀಯಾ ಅಂತಾ ಕಿರಿಕ್ ಮಾಡಿದ್ದಾರೆ. ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯಿಂದ ಹೊರ ಎಳೆದು ಯುವಕನ ಮೇಲೆ ಮನಸ್ಸೊ ಇಲ್ಲೆ ಹಲ್ಲೆ ನಡೆಸಿದ್ದು ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಂಗಡಿಯಲ್ಲಿ ಎಂದಿನಂತೆ ಸಂಜೆ ವೇಳೆ ಪೂಜೆ ಮಾಡುವ ಸಮಯದಲ್ಲಿ ಭಜನೆ ಹಾಡು ಹಾಕ್ತಾ ಇದ್ದೆ. ಈ ವೇಳೆ ಅಂಗಡಿಗೆ ಬಂದು, ‘ನಮ್ಮ ಆಜಾನ್ ಟೈಂನಲ್ಲಿ ಯಾಕೆ ಹಾಡು ಹಾಕ್ತಾ ಇದ್ದೀಯಾ’ ಎಂದು ಪ್ರಶ್ನೆ ಮಾಡಿದ್ರು. ನಂತರ ಹಲ್ಲೆಗೆ ಮುಂದಾದ್ರು, ಆರಂಭದಲ್ಲಿ ತಡೆಯುವ ಪ್ರಯತ್ನ ಮಾಡಿದೆ. ಮೊದಲು ಸ್ಪೀಕರ್ ತೆಗೆದುಕೊಂಡು ನನ್ನ ತಲೆಗೆ ಹೊಡೆದರು. ಕೈಯಲ್ಲಿ ವೆಪನ್ ಕೂಡ ಇದ್ದ ಹಾಗೆ ಇತ್ತು. ಹಾಗಾಗಿ ಇಷ್ಟು ಗಾಯ ಆಗಿದೆ. ಎರಡು ತಿಂಗಳ ಹಿಂದೆ ಅಂಗಡಿ ಇಟ್ಟಿದ್ದೇನೆ. ಮೊದಲಿನಿಂದಲೂ ರೋಲ್ ಕಾಲ್ ಮಾಡೋದು ಹಣ ಕೀಳಲು ಗದರಿಸುವ ಪ್ರಯತ್ನ ಮಾಡ್ತಿದ್ರು. ಒಟ್ಟು ಆರು ಜನ ಬಂದಿದ್ರು ಸದ್ಯ ಕಂಪ್ಲೆಂಟ್ ಕೊಟ್ಟಿದ್ದೀನಿ ಎಫ್ ಐ ಆರ್ ಆಗಿದೆ ಎಂದಿದ್ದಾರೆ ಮುಖೇಶ್.
ಸದ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆಬೀಸಿದ್ದಾರೆ.