ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆ ಇಂದು(ಏ.20) ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಅದರಂತೆ ಮೇಖ್ರಿ ಸರ್ಕಲ್ ಬಳಿಯ HQTCಯಿಂದ ತೆರಳುತ್ತಿದ್ದ ವೇಳೆ ಭದ್ರತಾ ಲೋಪ ಉಂಟಾಗಿದೆ. ಮೋದಿಯವರು ಅರಮನೆ ಮೈದಾನಕ್ಕೆ ತೆರಳುವಾಗ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್, ಸೇರಿದಂತೆ ಹಲವಾರು ಮಂದಿಗೆ ರಸ್ತೆಗೆ ನುಗ್ಗಿ ಚೊಂಬು ಪ್ರದರ್ಶಿಸಿದ್ದಾರೆ. ಕೂಡಲೇ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನಲೆ ಪ್ರಮುಖ ಉಭಯ ಪಕ್ಷಗಳು ಕೂಡ ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಹೇಗಾದರೂ ಶತಾಯ ಗತಾಯ ಗೆಲುವು ಸಾಧಿಸಲು ಹರಸಾಹಸ ಪಡುತ್ತಿವೆ. ಈ ಹಿನ್ನಲೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಜೊತೆಗೆ ಭದ್ರತೆಗಾಗಿ ಎರಡು ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು.
ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಮಾಡಲಾಗಿತ್ತು. ಬಂದೋಬಸ್ತ್ಗಾಗಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್, ಪೊಲೀಸ್ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್ , ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿತ್ತು. ಆದರೂ ಈ ಬೆಳವಣಿಗೆ ಸಂಭವಿಸಿದೆ.