ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಸೇರಿದ್ದೆ. ಸದ್ಯ ಅದೇ ಪಕ್ಷದಲ್ಲೇ ಇದ್ದು, ಬಿಜೆಪಿ ಬೆಂಬಲಿಸುತ್ತೇನೆ. ಆದರೆ ಬಿಜೆಪಿಯ ಎಲ್ಲ ಸಿದ್ಧಾಂತಗಳನ್ನು ಒಪ್ಪಲಾರೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಜೆಡಿಎಸ್‌ನಲ್ಲೇ ಇದ್ದು ಬಿಜೆಪಿ ಬೆಂಬಲಿಸುವೆ. ಆದರೆ ಸಿಎಎ, ಹಿಜಾಬ್, ಆಝಾನ್‌ಗೆ ವಿರೋಧಿಸುವ ಬಿಜೆಪಿಯ ಸಿದ್ಧಾಂತಗಳನ್ನು ಒಪ್ಪಲಾರೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಲ್ಲಡ್ಕ ಶಾಲೆಗೆ ಭೇಟಿ ನೀಡಿದಾಗ ನಾನು ವಿರೋಧಿಸಿದ್ದೆ. ನಮ್ಮ ನಾಯಕರು ತಪ್ಪು ಮಾಡಿದರೆ ಅದನ್ನೂ ಪ್ರಶ್ನಿಸುವೆ ಹಾಗೂ ಖಂಡಿಸುವೆ ಎಂದಿದ್ದಾರೆ.
ಈ ಲೋಕಸಭಾ ಚುನಾವಣೆಯಲ್ಲಿ ನಾನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ನನ್ನ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ನಾನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಾ. 28ರಂದು ಕಂಕನಾಡಿಯಲ್ಲಿ ಆಯೋಜಿಸಲಾಗಿರುವ ಸಭೆಯಲ್ಲಿ ಬೆಂಬಲಿಗರ ಜತೆ ಚರ್ಚಿಸಿ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.