ಮಂಗಳೂರು: ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ಹಳೇ ವಿದ್ಯಾರ್ಥಿಗಳ ಸಂಘಟನೆ ಮೀಡಿಯಾ ಅಲೂಮ್ನಿ ಅಸೋಸಿಯೇಷನ್ (ಮಾಮ್)ನಿಂದ 2023-24ನೇ ಸಾಲಿನ ‘ಮಾಮ್ ಇನ್ಸ್ಪೈರ್’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳ ಯಾವುದೇ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯ ಸಾಧಕ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪ್ರಶಸ್ತಿ ನೀಡಲಾಗುತ್ತದೆ.
ಬಹುಮಾನ 5 ಸಾವಿರ ರೂ. ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. 2023-24ರಲ್ಲಿ ಯಾವುದೇ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಅಧ್ಯಯನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಪದವಿ ವಿದ್ಯಾರ್ಥಿಗಳ ಕನಿಷ್ಠ 8 ಲೇಖನಗಳು 2023ರ ಜೂನ್ನಿಂದ 2024ರ ಮೇ ಅಂತ್ಯದ ಒಳಗೆ ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿರಬೇಕು. ರೇಡಿಯೋ, ಟಿವಿ ಕಾರ್ಯಕ್ರಮಗಳು ಪ್ರಸಾರವಾಗಿರಬೇಕು. ಶೈಕ್ಷಣಿಕ ವಿಷಯಗಳಲ್ಲಿ ಶೇ.60ರಷ್ಟು ಅಂಕ ಗಳಿಸಿರಬೇಕು. ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಕನಿಷ್ಠ 12 ಲೇಖನ, ನುಡಿಚಿತ್ರಗಳು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿರಬೇಕು.
ಶೇ.55ರಷ್ಟು ಅಂಕ ಗಳಿಸಿರಬೇಕು. ಸಾಧನೆಗಳ ದಾಖಲೆಗಳನ್ನು ತಮ್ಮ ಸಂಸ್ಥೆ ಮುಖ್ಯಸ್ಥರಿಂದ ದೃಢೀಕರಿಸಿ, ಸ್ವವಿವರವುಳ್ಳ ಪತ್ರದ ಸಹಿತ ಅ.12ರ ಒಳಗೆ ಪಿಡಿಎಫ್ ಫೈಲ್ನಲ್ಲಿ [email protected]ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ 9449588440 ಸಂಪರ್ಕಿಸಬಹುದು.