ಕಾಸರಗೋಡು: ಬೈಕ್‌ಗಳು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ವ್ಯಕ್ತಿಯೊಬ್ಬರ ಮೇಲೆ ಬಸ್ ಹರಿದು ಮೃತಪಟ್ಟಿದ್ದಾರೆ. ಗಾಯಗೊಂಡ ಮತ್ತೊಬ್ಬ ಸ್ಕೂಟರ್ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಳ್ಳೇರಿಯದ ತಿಮ್ಮಪ್ಪ (60) ಮೃತರು. ಗಾಯಗೊಂಡಿರುವ ಕಿನ್ನಿಂಗಾರ ಮೂಲದ ಗಿರೀಶ್ (37) ಅವರನ್ನು ಮುಳ್ಳೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಳ್ಳೂರು ಪಲ್ಲಪಾಡಿಯಲ್ಲಿ ಅಪಘಾತ ಸಂಭವಿಸಿದೆ. ಬೈಕ್‌ಗಳು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ತಿಮ್ಮಪ್ಪ ರಸ್ತೆಗೆ ಬಿದ್ದಿದ್ದಾರೆ. ಕಾಸರಗೋಡಿನಿಂದ ಕಿನ್ನಿಂಗಾರ್ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ತಿಮ್ಮಪ್ಪ ಅವರ ದೇಹದ ಮೇಲೆ ಹರಿದಿದೆ.
ಗಂಭೀರವಾಗಿ ಗಾಯಗೊಂಡ ತಿಮ್ಮಪ್ಪ ಅವರನ್ನು ಕಾಸರಗೋಡು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದೂರು ಪೊಲೀಸರು ಸ್ಥಳಕ್ಕಾಗಮಿಸಿದ್ದರು. ಅಸಹಜ ಸಾವು ಪ್ರಕರಣ ದಾಖಲಾಗಿದೆ.
image: karaval daily