ಕುಡಿದ ಮತ್ತಿನಲ್ಲಿ ತಂದೆ ಮಗನ ನಡುವೆ ನಡೆದ ಜಗಳ ನಡೆದು ಬೆಳಿಗ್ಗೆ ಕೊಲೆಯಲ್ಲಿ ಅಂತ್ಯವಾಗಿದೆ. ಚಳ್ಳಕೆರೆ ತಾಲೂಕಿನ ವರವು ಕಾವಲು ಬಳಿ ಈ ಘಟನೆ ನಡೆದಿದೆ. ಸೂರಯ್ಯ (55) ಕೊಲೆಯಾದ ವ್ಯಕ್ತಿ, ಮೋಹನ್ ತಂದೆಯನ್ನು ಹತ್ಯೆ ಮಾಡಿದ ಆರೋಪಿ.
ಘಟನೆ ನಡೆದ ನಂತರ ಚಳ್ಳಕೆರೆ ಠಾಣೆಗೆ ಬಂದು ಶರಣಾಗಿದ್ದಾನೆ. ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಭೇಟಿ ನೀಡಿ ಹೆಚ್ಚಿನ ಪರಿಶೀಲನೆ ನಡೆಸಿದ್ದಾರೆ.