Sunday, May 18, 2025

ಮಂಗಳೂರು: ರಾಜ್ಯಮಟ್ಟದ ಮುಸ್ಲಿಂ ಸಾಹಿತ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಮಂಗಳೂರು: ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಉತ್ತಮ ಕನ್ನಡ ಕೃತಿಗೆ ರಾಜ್ಯಮಟ್ಟದ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಯನ್ನು ನೀಡುತ್ತಾ ಬಂದಿದ್ದು, 2023ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು 10,000 ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ.

ಆಸಕ್ತ ಮುಸ್ಲಿಮ್ ಬರಹಗಾರರು ಕನ್ನಡದಲ್ಲಿ ಪ್ರಕಟಿತ 2023ನೇ ಸಾಲಿನ ಕೃತಿಯ ನಾಲ್ಕು ಪ್ರತಿಗಳನ್ನು ಸೆಪ್ಟೆಂಬರ್ 10ರ ಒಳಗಾಗಿ ಸಂಚಾಲಕರು, ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ, ಮುಸ್ಲಿಮ್ ಲೇಖಕರ ಸಂಘ, ಹಿದಾಯತ್ ಸೆಂಟರ್, ಬೀಬಿ ಅಲಾಬಿ ರಸ್ತೆ, ಮಂಗಳೂರು575001(ದೂ.ಸಂ. 9845054191, 0824-2410358) ಈ ವಿಳಾಸಕ್ಕೆ ಕಳುಹಿಸುವಂತೆ ಕೋರಲಾಗಿದೆ.

ಅನುವಾದಿತ ಕೃತಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಹಾಗೂ ಪ್ರಶಸ್ತಿಗಾಗಿ ಕಳುಹಿಸುವ ಕೃತಿಗಳನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ ಎಂದು ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು. ಹೆಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Latest Articles