ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ ಎಂಟು ಭಾರಿ ಅಂಬಾರಿ ಹೊತ್ತಿದ್ದ ಅರ್ಜುನ್ ಆನೆ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು.
ದಸರಾ ಸಮಯದಲ್ಲಿ ಅರ್ಜುನನ ಗಾಂಭೀರ್ಯ 👇👇
ಈ ವೇಳೆ ಪುಂಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಉಳಿದ ಮೂರು ಆನೆಗಳು ಒಂಟಿ ಸಲಗವನ್ನು ಹಿಮ್ಮಟ್ಟಿಸಿದೆ. ಆದರೆ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಅರ್ಜುನ ಮೃತಪಟ್ಟಿದೆ ಎಂದು ಮೂಲಗಳು ತಿಳಿಸಿವೆ.