ಮೈಸೂರು: ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ನಂಜನಗೂಡಿನ ಸಿದ್ದೇಗೌಡ ಲೇಔಟ್‌ನ ಶಬರೀಶ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಆತ್ಮಹತ್ಯೆ ಮಾಡಿಕೊಂಡ ಶಬರೀಶ್ ನಂಜನಗೂಡಿನ ವಜ್ರದೇಹಿ ಜಿಮ್‌ನಲ್ಲಿ ಟ್ರೈನರ್ ಆಗಿದ್ದ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೃತ ಜಿಮ್ ಟ್ರೈನರ್ ಶಬರೀಶ್ ಸಾವಿಗೆ ಯಾರೂ ಕಾರಣರಲ್ಲ ಎಂದು ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.