Tuesday, March 18, 2025

ಅನುಚಿತವಾಗಿ ವರ್ತಿಸಿದ ವ್ಯಕ್ತಿಯನ್ನು ನಗ್ನಗೊಳಿಸಿ ಥಳಿತ – ವೀಡಿಯೋ ವೈರಲ್

ಬಟ್ಟೆ ಅಂಗಡಿಯೊಂದರಲ್ಲಿ ತಮ್ಮ ಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ಆರೋಪಿಸಿ ಪೋಷಕರು ವ್ಯಕ್ತಿಯನ್ನು ನಗ್ನಗೊಳಿಸಿ ಥಳಿಸಿದ ಘಟನೆ ನಡೆದಿದೆ.

ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿರುವ JCPenney ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ಸಂಪೂರ್ಣ ಬೆತ್ತಲೆಯಾಗಿ ತನ್ನನ್ನು ರಕ್ಷಿಸಿಕೊಳ್ಳಲು ಅಂಗಡಿ ತುಂಬೆಲ್ಲಾ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಎಕ್ಸ್‌‌ನಲ್ಲಿ ಈ ಬಗ್ಗೆ ಪೋಸ್ಟ್‌ಗಳು ಹರಿದಾಡುತ್ತಿದೆ‌.

” ತಮ್ಮ ಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸಲು ಪ್ರಯತ್ನಿಸಿದ ನಂತರ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿರುವ ಪೋಷಕರು JCPenney ಅಂಗಡಿಯಲ್ಲಿ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಶಿಕ್ಷಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನ ಎಕ್ಸ್‌‌ನಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋ ಅಪ್‌ಲೋಡ್ ಮಾಡಿದ ನಂತರ ವೀಡಿಯೊ 2.6 ಮಿಲಿಯನ್ ವೀಕ್ಷಣೆಗಳೊಂದಿಗೆ ವೈರಲ್ ಆಗಿದೆ. ಕೆಲವರು ಮಕ್ಕಳನ್ನು ರಕ್ಷಿಸಲು ಇಂಥವರಿಗೆ ಇದೇ ಸರಿಯಾದ ಶಿಕ್ಷೆ ಎಂದಿದ್ದಾರೆ.

Related Articles

Latest Articles