ನವದೆಹಲಿ: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಆಯ್ಕೆಯಾಗಿದ್ದಾರೆ.
ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಯಾದವ್ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಯಾರಾಗುವರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.
ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಪಟೇಲ್, ನರೇಂದ್ರ ಸಿಂಗ್ ತೋಮರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ, ಮಧ್ಯಪ್ರದೇಶ ರಾಜ್ಯ ಘಟಕದ ಅಧ್ಯಕ್ಷ ವಿ.ಡಿ. ಶರ್ಮ ಅಲ್ಲದೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಿ.ಎಂ ಸ್ಥಾನದ ಆಕಾಂಕ್ಷಿಗಳಾಗಿದ್ದರು.