Tuesday, July 23, 2024

ಕರ್ನಾಟಕ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ: ಸಂಪುಟದಲ್ಲಿ ನಡೆದಿಲ್ಲ ಚರ್ಚೆ – ಹೆಚ್‌ಕೆ ಪಾಟೀಲ್

ಟಿಪ್ಪು ಜಯಂತಿ ಆಚರಣೆಗೆ ಪರ ವಿರೋಧದ ಇದ್ದೇ ಇದೆ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಇದ್ದು, ಟಿಪ್ಪು ಜಯಂತಿ ಅಧಿಕೃತವಾಗಿ ಆಚರಿಸಲಾಗುತ್ತದೆ ಎಂಬ ಪ್ರಶ್ನೆಗೆ ತೆರೆ ಬಿದ್ದಿದೆ‌. ಈ ಬಗ್ಗೆ‌ ಹೆಚ್​ಕೆ ಪಾಟೀಲ್ ಮಾತಾಡಿದ್ದಾರೆ.

ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು 2019ರಲ್ಲೇ ಹಿಂಪಡೆಯಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ ಎಂದಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಕ್ಯಾಬಿನೆಟ್​ನಲ್ಲೂ ಟಿಪ್ಪು ಜಯಂತಿ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೆಚ್​ಕೆ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ

Related Articles

Latest Articles