Wednesday, February 19, 2025

ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಣೆಗೆ ಬ್ರೇಕ್: ರಾಜ್ಯ ಸರ್ಕಾರದಿಂದ ಸುತ್ತೋಲೆ

ಯುಗಾದಿ, ರಂಜಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾತಿ ಸೇರಿದಂತೆ ಯಾವುದೇ ಧಾರ್ಮಿಕ ಹಬ್ಬಗಳನ್ನು ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು,ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ಸಮಾಜ ಕಲ್ಯಾಣ ಸಚಿವ ಎಚ್​ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ.

10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ, ಕಾಲೇಜುಗಳಲ್ಲಿ ಆಚರಿಸಬಹುದು. ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ. ನಿಯಮ ಉಲ್ಲಂಘನೆ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಮತ್ತು ಕಾಲೇಜುಗಳಿಗೆ ಈ ಸುತ್ತೋಲೆ ಅನ್ವಯವಾಗುತ್ತದೆ ಎಂದು ಉಲ್ಲೇಖಿಸಲಾಗಿದೆ. ಹೀಗಾಗಿ ರಾಜ್ಯದ ಖಾಸಗಿ ಶಾಲೆ, ಕಾಲೇಜುಗಳಿಗೆ ಸುತ್ತೋಲೆಯು ಅನ್ವಯವಾಗುವುದಿಲ್ಲ ಎನ್ನಲಾಗಿದೆ.

Related Articles

Latest Articles