Sunday, May 18, 2025

BIG BREAKING: ಆಪರೇಷನ್ ಸಿಂಧೂರ್ – ನ್ಯಾಯ ದೊರಕಿತು. ಜೈ ಹಿಂದ್ ಎಂದ ಭಾರತೀಯ ಸೇನೆ

ಭಾರತ ರಾತ್ರೋರಾತ್ರಿ ಉಗ್ರರಿಗೆ ನರಕ ದರ್ಶನ ಮಾಡಿಸಿದೆ. ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನ ಕಾರ್ಯಾಚರಣೆ ನಡೆಸಿದೆ.‌ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಭಾರತದ ರಕ್ಷಣಾ ಸಚಿವಾಲಯ ತಿಳಿಸಿದೆ.

‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಭಾರತೀಯ ಸೇನಾ ಕಾರ್ಯಾಚರಣೆಯ ಪರಿಣಾಮವಾಗಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಸ್ಫೋಟಗಳ ವರದಿಗಳು ಬಂದಿವೆ ಎಂದು ರಕ್ಷಣಾ ಸಚಿವಾಲಯ ದೃಢಪಡಿಸಿದ ಸ್ವಲ್ಪ ಸಮಯದ ನಂತರ, ಭಾರತೀಯ ಸೇನೆಯು ಎಕ್ಸ್‌ ಪೋಸ್ಟ್‌ನಲ್ಲಿ “ನ್ಯಾಯ ದೊರಕಿತು. ಜೈ ಹಿಂದ್!” ಎಂದು ತಿಳಿಸಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಕ್ಸ್‌ನಲ್ಲಿ ‘ಭಾರತ್ ಮಾತಾ ಕಿ ಜೈ’ ಎಂದು ಬರೆದಿದ್ದಾರೆ.

ಪಾಕಿಸ್ತಾನದಲ್ಲಿ ಒಂಭತ್ತು ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ಸೇನಾ ದಾಳಿಗಳು ನಡೆದಿದೆ ಎಂದು ಪತ್ರಿಕಾ ಮಾಹಿತಿ ಬ್ಯೂರೋ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Latest Articles