ಭಾರತ ಮತ್ತು ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ. ಇದೇ ಸಂದರ್ಭದಲ್ಲಿ ಭಾರತೀಯ ಸೇನಾ ಪಡೆ ಎರಡು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ 2 ಜೆಟ್ಗಳನ್ನು ಶನಿವಾರ ಹೊಡೆದುರುಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.
ಮೂಲಗಳ ಪ್ರಕಾರ, 2 ಪಾಕಿಸ್ತಾನಿ ಜೆಟ್ಗಳ ಪೈಕಿ ಒಂದನ್ನು ಶ್ರೀನಗರದ ಲಾಸ್ಜನ್ ಬಳಿ ಹೊಡೆದುರುಳಿಸಲಾಗಿದೆ ಮತ್ತು ಇನ್ನೊಂದನ್ನು ಉತ್ತರ ಕಾಶ್ಮೀರದಲ್ಲಿ ಹೊಡೆದುರುಳಿಸಲಾಗಿದೆ.
ಘಟನೆಯ ಬಗ್ಗೆ ರಕ್ಷಣಾ ಇಲಾಖೆ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಭಾರತೀಯ ಸೇನೆ ಹೊಡೆದುರುಳಿಸಿರುವುದು F-16 ಜೆಟ್ಗಳು ಎಂದು ವರದಿಯಾಗಿದೆ. ಏತನ್ಮಧ್ಯೆ, ಉಭಯ ರಾಷ್ಟ್ರಗಳ ವಾಯುಪಡೆಗಳ ನಡುವಣ ದಾಳಿ, ಪ್ರತಿದಾಳಿ ಮುಂದುವರಿದಿರುವುದನ್ನು ಸರ್ಕಾರಿ ಮೂಲಗಳು ದೃಢಪಡಿಸಿವೆ.