ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಮೂವರು ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ. ಕಾಂಗ್ರೆಸ್ ವಿರುದ್ಧ ಜೆಡಿಎಸ್, ಬಿಜೆಪಿ ಮೈತ್ರಿ ಸೋತಿದೆ.
ಇನ್ನು, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಬೆನ್ನಲ್ಲೇ ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿತ್ತು. ಕಾಂಗ್ರೆಸ್ ವಿಜಯೋತ್ಸವದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೇಳಿಬಂದಿದೆ.
ಕಾಂಗ್ರೆಸ್ನ ನಾಸೀರ್ ಹುಸೇನ್ ರಾಜ್ಯಸಭೆಗೆ ಆಯ್ಕೆ ಬೆನ್ನಲ್ಲೆ ಈ ಕೂಗು ಕೇಳಿ ಬಂದಿದೆ. ನಾಸೀರ್ ಹುಸೇನ್ ಪಕ್ಕದಲ್ಲಿ ಇರುವಾಗಲೇ ಕಾರ್ಯಕರ್ತರು ಹೀಗೆ ಘೋಷಣೆ ಕೂಗಿದ್ದು ವಿವಾದಕ್ಕೆ ಕಾರಣವಾಗಿದೆ.