Monday, December 9, 2024

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್‌.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ.

ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋ ಪ್ರಕರಣ ಜೆಡಿಎಸ್ ಪಕ್ಷದಲ್ಲಿ ಮುಜುಗರ ಹಾಗೂ ತೀವ್ರ ಸಂಚಲನ ಸೃಷ್ಟಿಸಿತ್ತು. ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಹಾಗೂ ಎಫ್‌ಐಆರ್ ದಾಖಲಾದ ಮೇಲೆ ಜೆಡಿಎಸ್ ನಾಯಕರು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದಲೇ ವಜಾಗೊಳಿಸುವಂತೆ ಆಗ್ರಹಿಸಿದ್ದರು.

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಪ್ರಕರಣ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಮೇಲೆ ಜೆಡಿಎಸ್ ವರಿಷ್ಠ, ಹೆಚ್‌.ಡಿ ದೇವೇಗೌಡರು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸುವ ನಿರ್ಧಾರ ಕೈಗೊಂಡಿದ್ದಾರೆ.

Related Articles

Latest Articles