Tuesday, April 22, 2025

ವಾರಾಣಸಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್ ಗಾಂಧಿ

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪ್ರಿಯಾಂಕಾ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು 2ರಿಂದ 3 ಲಕ್ಷ ಮತಗಳಿಂದ ಸೋಲಿಸುತ್ತಿದ್ದರು ಎಂದು ಹೇಳಿದ್ದಾರೆ.

ಅಮೇಥಿ ಮತ್ತು ರಾಯ್ ಬರೇಲಿ ಲೋಕಸಭಾ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಕೃತಜ್ಞತಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಅವರು, ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಗೆಲುವು ಐತಿಹಾಸಿಕವಾದುದು.

ತಾನು ಮತ್ತು ಪಕ್ಷದ ಇತರ ಸಂಸದರು ಚುನಾವಣಾ ಫಲಿತಾಂಶದ ಬಗ್ಗೆ ಅಹಂಕಾರ ಪಡುವುದಿಲ್ಲ. ಜನಸಾಮಾನ್ಯರ ಉದ್ದೇಶಕ್ಕಾಗಿ ಕೆಲಸ ಮಾಡುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಅಯೋಧ್ಯೆಯಲ್ಲಿ ಬಿಜೆಪಿಯ ಸೋಲನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಜನರನ್ನು ಕಡೆಗಣಿಸಿದ್ದಾರೆ. ಕೈಗಾರಿಕೋದ್ಯಮಿಗಳು ಮತ್ತು ಇತರ ವ್ಯಕ್ತಿಗಳಿಗೆ ಪ್ರಾಮುಖ್ಯತೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಜನಸಾಮಾನ್ಯರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ.

ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮತ್ತು ಅಮೇಥಿಯಲ್ಲಿ ಕೆಎಲ್ ಶರ್ಮಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಧನ್ಯವಾದ ಸಮಾವೇಶವನ್ನು ಆಯೋಜಿಸಲಾಗಿತ್ತು. ಯುಪಿಯಲ್ಲಿ ಕಾಂಗ್ರೆಸ್ 6 ಲೋಕಸಭಾ ಸ್ಥಾನಗಳನ್ನು ಗೆದ್ದುಕೊಂಡರೆ, ಸಮಾಜವಾದಿ ಪಕ್ಷವು 80ರಲ್ಲಿ 37 ಸ್ಥಾನಗಳನ್ನು ಗಳಿಸಿತು. ಬಿಜೆಪಿ 2019ರ ಚುನಾವಣೆಯಲ್ಲಿ 64 ಸ್ಥಾನಗಳನ್ನು ಪಡೆದಿದ್ದು ಈ ಬಾರಿ 33 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಹಿನ್ನಡೆ ಅನುಭವಿಸಿತು.

Related Articles

Latest Articles