Monday, December 9, 2024

ಮೀನುಗಾರರ ಬಲೆಗೆ ಬಿದ್ದ ಅತ್ಯಾಪರೂಪದ ಮೀನು…! ಇದನ್ನು ತಿಂದರೆ ಪ್ರಾಣಕ್ಕೆ ಆಪತ್ತು ಇದೆಯಾ?

ಮೀನುಗಾರರ ಬಲೆಗೆ ಅಪರೂಪದ ಮೀನು ಸಿಕ್ಕಿದೆ. ಮೀನಿನ ವಿಚಿತ್ರ ರೂಪವನ್ನು ಕಂಡು ಒಂದು ಕ್ಷಣ ಮೀನುಗಾರರೇ ದಂಗಾಗಿದ್ದಾರೆ. ಈ ವಿಚಿತ್ರ ಮೀನು ಆಂಧ್ರ‌ಪ್ರದೇಶದ ವಿಶಾಖಪಟ್ಟಣಂ ಸಮುದ್ರದಲ್ಲಿ ದೊರಕಿದೆ‌.

ಮೀನಿನ ಬಗ್ಗೆ ವಿಶಾಖಪಟ್ಟಣಂನ ಸಹಾಯಕ ಮೀನುಗಾರಿಕಾ ನಿರ್ದೇಶಕ ಡಾ. ಪಿ. ಶ್ರೀನಿವಾಸ್​ ರಾವ್​ ಮಾಹಿತಿ ನೀಡಿದ್ದು, ಇದು ಪಫ್ಫರ್​ ಫಿಶ್​ ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯ ಮೀನುಗಾರರು ಇದನ್ನು ಸಮುದ್ರ ಕಪ್ಪೆ ಎಂದು ಭಾವಿಸಿದ್ದರು. ಈ ಮೀನು ಸಮುದ್ರದ ಆಳದಲ್ಲಿ ಅಲೆದಾಡುತ್ತವೆ. ಬಲೆಗೆ ಬಿದ್ದಾಗ ಅಥವಾ ಯಾರಾದರು ದಾಳಿ ಮಾಡಿದಂತಹ ಸಂದರ್ಭದಲ್ಲಿ ತಮ್ಮ ದೇಹವನ್ನು ಬಲೂನ್​ ರೀತಿ ಮಾಡಿಕೊಳ್ಳುತ್ತವೆ. ಈ ಮೀನು ನೋಡಲು ಸ್ವಲ್ಪ ಮನುಷ್ಯನ ರೀತಿ ಕಾಣುತ್ತದೆ.

ಅಂದಹಾಗೆ ಈ ಪಫ್ಪರ್ ಫಿಶ್​ ತುಂಬಾ ವಿಷಕಾರಿ ಮೀನು. ಇತರ ಸಮುದ್ರ ಪ್ರಭೇದಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು, ಈ ಮೀನಿನ ಯಕೃತ್ತಿನಲ್ಲಿ ಶಕ್ತಿಯುತವಾದ ವಿಷ ಉತ್ಪಾದನೆಯಾಗುತ್ತದೆ. ಈ ವಿಷವು ಸೈನೈಡ್‌ಗಿಂತ 1,000 ಪಟ್ಟು ಹೆಚ್ಚು ಮಾರಕವಾಗಿದೆ. ಇದನ್ನು ಹೆಚ್ಚಾಗಿ ಜಪಾನೀಯರು ಸೇವನೆ ಮಾಡುತ್ತಾರೆ.

ಕೆಲವು ತರಬೇತಿ ಪಡೆದ ಜಪಾನಿನ ಬಾಣಸಿಗರಿಗೆ ಮಾತ್ರ ಈ ಮೀನನ್ನು ಸೂಕ್ಷ್ಮವಾಗಿ ಬೇಯಿಸುವುದು ಹೇಗೆ ಎಂದು ತಿಳಿದುಕೊಂಡಿದ್ದಾರೆ ಎಂಬುದು ಗಮನಾರ್ಹ ಸಂಗತಿ. ಅಲ್ಲದೆ, ಈ ಮೀನು ಅಡುಗೆ ಮಾಡಲು ಲೈಸೆನ್ಸ್​ ಸಹ ಪಡೆಯಬೇಕಿದೆ. ಈ ಮೀನು ಖಾದ್ಯ ತಿಂದು ಪ್ರತಿ ವರ್ಷ ನೂರಾರು ಜಪಾನಿಗರು ಸಾಯುತ್ತಾರೆ.

Related Articles

Latest Articles