ಉಡುಪಿ: ಸರ್ವ ಭಾಷೆಗಳಿಗೆ ಮೂಲ ಸಂಸ್ಕೃತ. ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ. ತುಳು, ಕನ್ನಡ, ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಗಳು ಹುಟ್ಟಿಕೊಂಡಿರುವುದೇ ಸಂಸ್ಕೃತದಿಂದ. ಕೇವಲ ಭಾರತೀಯ ಭಾಷೆಗಳಿಗೆ ಮಾತ್ರ ಸಂಸ್ಕೃತ ಮೂಲವಲ್ಲ. ಆಂಗ್ಲ ಭಾಷೆಗಳಿಗೂ ಮೂಲ ಸಂಸ್ಕೃತವೇ ಎಂದು ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಹೇಳಿದ್ದಾರೆ.
ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಜನ್ಮಾಷ್ಟಮಿ ಸಮಾರೋಪ ಕಾರ್ಯಕ್ರಮದಲ್ಲಿ ಈ ಮಾತುಗಳನ್ನಾಡಿದ್ದಾರೆ. ಈ ವೇಳೆ ಸಂಸ್ಕೃತ ಭಾಷೆಯಲ್ಲಿ ಮಾತನಾಡಿರುವ ಸುಗುಣೇಂದ್ರ ತೀರ್ಥರು, ಸ್ವರ್ಗಕ್ಕೆ ಹೋಗಬೇಕಾದರೆ ಸಂಸ್ಕೃತ ಕಲಿಯಬೇಕು. ಸಂಸ್ಕೃತ ವಿಶ್ವಭಾಷೆ, ಪವಿತ್ರ.. ಶ್ರೇಷ್ಠ.. ಪಾವನ ಎಂದರು.
ದೇವಲೋಕದಲ್ಲಿ ವ್ಯವಹರಿಸುವುದು ಸಂಸ್ಕೃತ ಭಾಷೆಯಲ್ಲಿ ಮಾತ್ರ. ಸಂಸ್ಕೃತ ದೇವ ಭಾಷೆ. ಸಂಸ್ಕೃತ ಭಾಷೆ ತಿಳಿಯದಿದ್ದರೆ ದೇವಲೋಕಕ್ಕೆ ವೀಸಾ ಸಿಗುವುದಿಲ್ಲ. ಸ್ವರ್ಗ ಲೋಕಕ್ಕೆ ಹೋಗಬೇಕಾದರೆ ಸಂಸ್ಕೃತ ಕಲಿಯಲೇಬೇಕು ಎಂದಿದ್ದಾರೆ.
- ಮಂಗಳೂರು: ‘ಜನೌಷಧಿ ಕೇಂದ್ರ ಮುಚ್ಚಿಸುತ್ತಿರುವ ಜನ ವಿರೋಧಿ ಕಾಂಗ್ರೆಸ್ ಸರ್ಕಾರ’- ಸಂಸದ ಕ್ಯಾ. ಚೌಟ ಆಕ್ರೋಶ
- ಅಬಕಾರಿ ಅಧಿಕಾರಿಗಳಿಂದ ಅನ್ಯರಾಜ್ಯದ ಕಾರ್ಮಿಕರ ದರೋಡೆ – ನಾಲ್ವರ ಬಂಧನ
- ದ್ವಿಚಕ್ರ ವಾಹನ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದ ಮೃತ್ಯು
- ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ ಬರೋಬ್ಬರಿ 10 ಸಾವಿರ ರೂಪಾಯಿ
- ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಒಂದು ತಿಂಗಳುಗಳ ಕಾಲ ನಡೆದ ಶ್ರೀ ಕೃಷ್ಣ ಮಹಾಸ್ವೋತ್ಸವವನ್ನು ದೇವರಿಗೆ ಅರ್ಪಣೆ ಮಾಡಿದ್ದೇವೆ. ಸಂಸ್ಕೃತ ಒಂದು ವಿಶ್ವ ಭಾಷೆ, ದೇವ ಭಾಷೆ. ದೇವರ ಕಾರ್ಯಕ್ರಮದಲ್ಲಿ ದೇವ ಭಾಷೆಯನ್ನೇ ಬಳಸುತ್ತೇವೆ. ಸರ್ವ ಭಾಷೆಗಳಿಗೆ ಮೂಲ ಸಂಸ್ಕೃತ. ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ. ತುಳು, ಕನ್ನಡ, ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಗಳು ಹುಟ್ಟಿಕೊಂಡಿರುವುದೇ ಸಂಸ್ಕೃತದಿಂದ. ಕೇವಲ ಭಾರತೀಯ ಭಾಷೆಗಳಿಗೆ ಮಾತ್ರ ಸಂಸ್ಕೃತ ಮೂಲವಲ್ಲ. ಆಂಗ್ಲ ಭಾಷೆಗಳಿಗೂ ಮೂಲ ಸಂಸ್ಕೃತವೇ. ಪಿತಾದಿಂದ ಫಾದರ್.. ಮಾತಾದಿಂದ ಮದರ್ ಹುಟ್ಟಿಕೊಂಡಿದೆ.
ಸಮಗ್ರವೂ ಸಂಸ್ಕೃತ ಭಾಷೆಯಿಂದ ಹುಟ್ಟಿಕೊಂಡಿದೆ. ಸಂಸ್ಕೃತ ಭಾಷೆಯನ್ನು ಹೊರತುಪಡಿಸಿ ಇತರ ಭಾಷೆಗಳು ಪ್ರಾದೇಶಿಕ ಭಾಷೆಗಳಾಗಿವೆ. ಕರ್ನಾಟಕದಲ್ಲಿ ಕನ್ನಡ, ದೇಶದಲ್ಲಿ ಹಿಂದಿ, ವಿದೇಶದಲ್ಲಿ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆಯು ಸಂಸ್ಕೃತ ಭಾಷಾ ಅಂತರ್ಲೋಕೀಯ ಭಾಷೆಯಾಗಿದೆ ಎಂದು ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಶಾಸಕ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಪ್ರಮೋದ್ ಮಧ್ವರಾಜ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.