Sunday, May 18, 2025

ಅಯೋಧ್ಯೆಯಲ್ಲಿ ಬಿಜೆಪಿ ಸೋಲು: ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್‌ಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡ ಪುತ್ತೂರಿನ ಯುವಕ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಬಿಜೆಪಿ ಕಾರ್ಯಕರ್ತರಿಗೆ ಭಾರೀ ದುಃಖ ಒಡ್ಡಿದ್ದಂತೂ ಸುಳ್ಳಲ್ಲ.‌ ದೇಶದ ಚಿತ್ತವನ್ನೇ ತನ್ನತ್ತ ಸೆಳೆದ ಕ್ಷೇತ್ರದ ಅಂದರೆ ಅದು ಫೈಜಾಬಾದ್. ಪುತ್ತೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ಬಿಜೆಪಿ ಅಭ್ಯರ್ಥಿ ಲಲ್ಲುಸಿಂಗ್ ಅವರಿಗೆ ಕರೆ ಮಾಡಿ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದರ ಆಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಫೈಜಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಗೆ ದೂರವಾಣಿ ಕರೆ ಮಾಡಿದ ಪುತ್ತೂರಿನ ಬಿಜೆಪಿ ಕಾರ್ಯಕರ್ತ ಜಗದೀಶ್ ರೈ ಅವರು ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಸೋಲಿನ ಕಾರಣವನ್ನು ಅಭ್ಯರ್ಥಿಯಲ್ಲಿ ಪ್ರಶ್ನಿಸಿದ ಪುತ್ತೂರಿನ ಬಿಜೆಪಿ ಕಾರ್ಯಕರ್ತ, ಲೋಕಸಭಾ ಸದಸ್ಯರಾಗಿ ಒಂದು ಬಾರಿಯೂ ಕ್ಷೇತ್ರಕ್ಕೆ ಭೇಟಿ ನೀಡಿಲ್ಲ. ಯೋಗಿಜಿಯವರು ನಿಮ್ಮನ್ನು ಚುನಾವಣೆಗೆ ಸ್ಪರ್ಧಿಸದಂತೆ ತಡೆದಿದ್ದರು. ಆದರೂ ನಿಮಗೆ ಟಿಕೆಟ್ ನೀಡಲಾಗಿತ್ತು ಎಂದಿದ್ದಾರೆ.

ಅಯೋಧ್ಯೆಯ ಜನ ನಿಮ್ಮನ್ನು ತಿರಸ್ಕರಿಸಿದ್ದರೂ ಮತ್ತೆ ಮತ್ತೆ ಯಾಕೆ ಚುನಾವಣೆಗೆ ಸ್ಪರ್ಧಿಸಿದ್ದೀರಿ, ನೀವು ಸೋಲೋದಕ್ಕೆ ಏನು ಕಾರಣ ಎಂದು ಪ್ರಶ್ನಿಸಿದ್ದಾರೆ. ಅಯೋಧ್ಯೆಯಲ್ಲಿ ನಿಮ್ಮ ಸೋಲಿನಿಂದಾಗಿ ನಮ್ಮಂತಹ ಬಿಜೆಪಿ ಕಾರ್ಯಕರ್ತರಿಗೆ ಅವಮಾನವಾಗಿದೆ. ರಾಮಮಂದಿರ ಇರುವ ಕ್ಷೇತ್ರದಲ್ಲೇ ಬಿಜೆಪಿ ಸೋತಿದೆ ಎನ್ನುವ ಕುಹಕ ಕೇಳುವಂತಾಗಿದೆ ಎಂದರು. ಇದರಿಂದಾಗಿ ಪ್ರಧಾನಿ ಮೋದಿಜಿಯವರ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಲಲ್ಲುಸಿಂಗ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

Related Articles

Latest Articles