ದಕ್ಷಿಣ ಕನ್ನಡ: ಪ್ರೌಢಶಾಲೆಯ ಬಾಲಕಿಯನ್ನು ಮಡಿಕೇರಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ ಬಗ್ಗೆ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಕಡಬ ಮೂಲದ ಯಜ್ಙೇಶ್ ಬಂಧಿತ ಆರೋಪಿಯಾಗಿದ್ದಾನೆ. ಕೆಲವು ತಿಂಗಳ ಹಿಂದೆ ಘಟನೆ ನಡೆದಿದ್ದು, ಬಾಲಕಿಯ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಶಿಕ್ಷಕಿಯರು ವಿಚಾರಿಸಿದ್ದಾರೆ.
ಈ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದ್ದು, ಪೋಷಕರಿಗೆ ಮಾಹಿತಿ ನೀಡಿ ಬಳಿಕ ದೂರು ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ಯುವಕನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.