Sunday, May 18, 2025

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಲ್ಲೂರಿನಲ್ಲಿ ನಡೆದಿದೆ.

ಕೆಯ್ಯೂರು ಉದ್ಯೋಳೆ ನಿವಾಸಿ ಸಚಿನ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಚಿನ್‌ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ. ಬಜರಂಗದಳ ಘಟಕದಲ್ಲೂ ಸಚಿನ್ ಸಕ್ರಿಯರಾಗಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ, ಅಕ್ಕ, ಭಾವ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Latest Articles