Tuesday, April 22, 2025

ಸಿದ್ದರಾಮಯ್ಯ ಕೆಳಗಿಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮಕೈಗೊಳ್ಳುತ್ತೆ – ಆರ್ ಅಶೋಕ್

ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು. ಇದಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು. ಸಿದ್ದರಾಮಯ್ಯ ಕೆಳಗಿಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಆರ್. ಅಶೋಕ್, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ನಾವು ಬೆಂಬಲಿಸುವುದಿಲ್ಲ. ಪ್ರಜ್ವಲ್ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಬಿಂಬಿಸಿಕೊಂಡು 2019ರ ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜ್ವಲ್ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು, ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು ಗುಪ್ತಚರ ದಳ ವಿಫಲವಾಗಿದೆ. ತಮ್ಮ ವೈಫಲ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕಾ ಎಂದು ಪ್ರಶ್ನಿಸಿದ ಅವರು ರಾಜ್ಯ ಸರ್ಕಾರಕ್ಕೆ ಪೊಲೀಸರ ಮೇಲೆ ಹಿಡಿತ ಇಲ್ಲ. ಸಿದ್ದರಾಮಯ್ಯ ಕೆಳಗಿಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Related Articles

Latest Articles