ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಜಾರ್ಖಂಡ್ ತಲುಪಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯಾತ್ರೆ ಕೈಗೊಂಡಿರುವ ಈ ಯಾತ್ರೆ ಮಹತ್ವ ಪಡೆದುಕೊಂಡಿದೆ.
ತಮ್ಮ ಭಾರತ್ ಜೋಡೋ ನ್ಯಾಯ ಯಾತ್ರೆಯ ಮಧ್ಯೆ ರಾಹುಲ್ ಗಾಂಧಿ ಅವರು ದಿಯೋಘರ್‌ನಲ್ಲಿರುವ ಬಾಬಾ ಬೈದ್ಯನಾಥ ಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬಾಬಾ ಬೈದ್ಯನಾಥ ಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ ರಾಹುಲ್ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಾಬಾ ಬೈದ್ಯನಾಥ ದೇವಾಲಯದಲ್ಲಿ ರುದ್ರಾಭಿಷೇಕ ನೆರವೇರಿಸಿದ ರಾಹುಲ್ ಗಾಂಧಿ ಅವರು ವಿಶೇಷ ಪೂಜೆಯಲ್ಲಿ ಭಾಗಿಯಾದರು.
ಕಳೆದ ಜನವರಿ 14ರಂದು ಮಣಿಪುರದಿಂದ ಆರಂಭವಾಗಿರುವ ಭಾರತ್ ಜೋಡೋ ನ್ಯಾಯ ಯಾತ್ರೆ ಸದ್ಯ ಜಾರ್ಖಂಡ್ ರಾಜ್ಯದಲ್ಲಿದೆ. 15 ರಾಜ್ಯಗಳಲ್ಲಿ ಸಂಚರಿಸುವ ರಾಹುಲ್ ಗಾಂಧಿ ಅವರ ಈ ಯಾತ್ರೆ ಮುಂಬೈನಲ್ಲಿ ಅಂತ್ಯವಾಗಲಿದೆ.