ಒಂದೇ ಕುಟುಂಬದ 3 ಜನ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಹೊರವಲಯದ ಯರಮರಸ್ ಬಳಿ ನಡೆದಿದೆ.
ಪತಿ ಶಬ್ಬಿರ್ ಅಹಮ್ಮದ್ (35), ಪತ್ನಿ ಜೆಲೆಖತ್ ಬೇಗಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆ ಮೂವರಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಬಾಲಕಿ ಕೈ ಕಟ್ಟಾಗಿ ಅಸ್ವಸ್ತಳಾಗಿದ್ದಾಳೆ.
ಮೈಮುನ್ ಬೇಗಂ ಎಂಬ ಬಾಲಕಿಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಯಾವುದೇ ಚಿಕಿತ್ಸೆಗೆ ಬಾಲಕಿ ಸ್ಪಂದಿಸುತ್ತಿಲ್ಲ ಎನ್ನಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.