Monday, October 14, 2024

ಶಾರ್ಟ್​​ ಸರ್ಕ್ಯೂಟ್​​ನಿಂದ ವ್ಯಕ್ತಿ ಸ್ಥಳದಲ್ಲೇ ಸಾವು

ರಾಯಚೂರು: ಶಾರ್ಟ್​ ಸರ್ಕ್ಯೂಟ್​​ನಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ IDSMT ಲೇಔಟ್​​ನಲ್ಲಿ ಈ ದುರಂತ ಸಂಭವಿಸಿದ್ದು, ಕಟ್ಟಡ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ವ್ಯಕ್ತಿ ಅಸುನೀಗಿದ್ದಾರೆ.

ಇನ್ನು, ಹೊರ ರಾಜ್ಯದ ಕಟ್ಟಡ ಕಾರ್ಮಿಕ ಹನುಮೇಶ್​​ (26) ಎಂಬಾತ ಮೃತ ದುರ್ದೈವಿ. ಮತ್ತೋರ್ವ ಗಾಯಾಳು ರಮೇಶ್​ ನವೀನ್​ ಎಂಬುವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಸದರಬಜಾರ್ ಪೊಲೀಸ್ ಠಾಣೆ ಕೇಸ್​ ದಾಖಲಾಗಿದೆ. ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆಗೆ ಮುಂದಾಗಿದ್ದಾರೆ.

Related Articles

Latest Articles