Sunday, March 23, 2025

ಪತ್ನಿಗೆ ಮೆಸೇಜ್ ಮಾಡಿದ ಅನ್ಯಕೋಮಿನ ಯುವಕನ ಬರ್ಬರ ಹತ್ಯೆ

ರಾಯಚೂರು: ದೇವಸ್ಥಾನದ ಪೂಜಾರಿಯ ಪತ್ನಿಗೆ ಅನ್ಯಕೋಮಿನ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿರುವ ಆಂಜನೇಯ ಗುಡಿ ಪೂಜಾರಿಯ ಪತ್ನಿಗೆ ಮುಸ್ಲಿಂ ಯುವಕ ಮೆಸೇಜ್ ಮಾಡಿದ್ದಕ್ಕೆ ಹತ್ಯೆ ಮಾಡಲಾಗಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.

ಖಾದರ್ ಭಾಷಾ (28) ಕೊಲೆಯಾದ ವ್ಯಕ್ತಿ. ಮಾರುತಿ ಕೊಲೆಗೈದ ಆರೋಪಿಯಾಗಿದ್ದಾನೆ. ಪತ್ನಿ‌ ಮೇಲೆ ಕಣ್ಣು ಹಾಕಿದ ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆ ಮಾಡಲಾಗಿದೆ.

ಹನುಮ ಜಯಂತಿ ದಿನದಂದೆ ಬರ್ಬರವಾಗಿ ಕೊಲೆಗೈಯಲಾಗಿದೆ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಮಾರುತಿ ಕೊಲೆಗೈದು ತಾನೇ ಖುದ್ದಾಗಿ ಠಾಣೆಗೆ ಬಂದು ಶರಣಾಗಿದ್ದಾನೆ. ‌ ಕೊಲೆಯಲ್ಲಿ 6 ರಿಂದ 7 ಜನ ಭಾಗಿಯಾಗಿರುವ ಶಂಕೆ ಇದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಕ್ತಸಿಕ್ತವಾಗಿ ಬಿದ್ದಿದ್ದ ಖಾದರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

Related Articles

Latest Articles