Friday, June 27, 2025

ಕರಾವಳಿಯಲ್ಲಿ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ, ರೆಡ್ ಅಲರ್ಟ್​ ಘೋಷಣೆ

ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಸೆ.‌ 26 ರ ವರೆಗೆ ಕರಾವಳಿಯಲ್ಲಿ ಅಧಿಕ ಮಳೆಯಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ

Related Articles

Latest Articles