ಕರ್ನಾಟಕದಲ್ಲಿ ಮುಂಗಾರು ಅಬ್ಬರ ಕೊಂಚ ಕಡಿಮೆಯಾಗಿತ್ತು, ಇದೀಗ ಮತ್ತೆ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹೊನ್ನಾವರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.