ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದೆ. ಮಳೆ ಹೊಡೆತಕ್ಕೆ ಸಿಲುಕಿ ಅದರಿಂದ ಸಹಜ ಸ್ಥಿತಿಯತ್ತ ಮರಳುತ್ತಿರುವಾಗಲೇ ಬೆಂಗಳೂರಿಗೆ ಮತ್ತೆ ವರುಣನ ಎಚ್ಚರಿಕೆ ಕೊಟ್ಟಿದೆ.
ಅಕ್ಟೋಬರ್ 21ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ 7 ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.