ಛತ್ತೀಸ್‌ಗಢದಲ್ಲಿ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಮುಖಂಡನ
ಭೀಕರ ಹತ್ಯೆಯಾಗಿದೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರತನ್ ದುಬೆ ಅವರನ್ನು ನಾರಾಯಣಪುರದಲ್ಲಿ ಹತ್ಯೆ ಮಾಡಲಾಗಿದೆ.
ರತನ್ ದುಬೆ ಅವರನ್ನು ಮಾವೋವಾದಿಗಳು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಚುನಾವಣೆಗೆ ಇನ್ನು ಮೂರು ದಿನಗಳು ಬಾಕಿ ಇರುವಾಗ ಪ್ರಚಾರದ ವೇಳೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸುವ ಕೊಲೆ ನಡೆದಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಜನರನ್ನುದ್ದೇಶಿ ಮಾತನಾಡುತ್ತಿದ್ದ ವೇಳೆ ಬಂದ ಇಬ್ಬರು ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಇರಿದು ಹತ್ಯೆ ಮಾಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.