Sunday, May 18, 2025

ಟೆಸ್ಟ್‌ ಕ್ರಿಕೆಟ್‌ಗೆ ರೋಹಿತ್ ಶರ್ಮಾ ದಿಢೀರ್‌ ನಿವೃತ್ತಿ ಘೋಷಣೆ; ಕಾರಣವೇನು?

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ್ದಾರೆ. ದಿಢೀರ್‌ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಶರ್ಮಾ ಅವರು ತಮ್ಮ ಅಭಿಮಾನಿಗಳಿಗೆ ಕಹಿ‌ ಸುದ್ದಿ ಕೊಟ್ಟಿದ್ದಾರೆ.

ಬಿಸಿಸಿಐ ಇಂಗ್ಲೆಂಡ್ ಪ್ರವಾಸಕ್ಕೆ ರೋಹಿತ್ ಶರ್ಮಾ ಅವರನ್ನು ನಾಯಕ ಸ್ಥಾನದಿಂದ ಕೊಕ್ ನೀಡುವ ಬಗ್ಗೆ ಚಿಂತನೆ ನಡೆಸಿತ್ತು. ರೋಹಿತ್ ಶರ್ಮಾ ಅವರ ಬದಲಿಗೆ ಯುವ ಆಟಗಾರನಿಗೆ ನಾಯಕನ ಪಟ್ಟ ಕಟ್ಟಲು BCCI ಆಯ್ಕೆ ಸಮಿತಿ ನಿರ್ಧಾರ ಮಾಡಿದೆ ಅನ್ನುವ ಬಗ್ಗೆ ವರದಿಯಾಗಿತ್ತು. ಇದರಿಂದಲೇ ನಿವೃತ್ತಿ ಘೋಷಿಸಿರಬಹುದು ಎಂದು ಹೇಳಲಾಗುತ್ತಿದೆ.

ಟೆಸ್ಟ್‌ ತಂಡದಲ್ಲಿ ನಾಯಕನ ಸ್ಥಾನ ಕಳೆದುಕೊಳ್ಳುವ ಸುಳಿವು ಸಿಗುತ್ತಿದ್ದಂತೆ ರೋಹಿತ್ ಶರ್ಮಾ ಅವರು ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವೈಟ್ ಕ್ರಿಕೆಟ್‌ ಹಾಗೂ ಟಿ20 ಕ್ರಿಕೆಟ್‌ಗೆ ಗುಡ್‌ ಬೈ ಹೇಳಿರುವ ರೋಹಿತ್ ಶರ್ಮಾ ಅವರು ಏಕದಿನ ಪಂದ್ಯದಲ್ಲಿ ಆಡುವ ವಿಶ್ವಾಸದಲ್ಲಿದ್ದಾರೆ.

ರೋಹಿತ್ ಶರ್ಮಾ ಅವರು ತಮ್ಮ ನಿವೃತ್ತಿಯ ಬಗ್ಗೆ ಇನ್ಸ್‌ಸ್ಟಾಗ್ರಾಂನಲ್ಲಿ ಅಧಿಕೃತವಾಗಿ ಪೋಸ್ಟ್ ಮಾಡಿದ್ದಾರೆ. ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ. ಇಷ್ಟು ದಿನ ವೈಟ್ ಕ್ರಿಕೆಟ್‌ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸುತ್ತಾ ಇದ್ದಿದ್ದು ನನಗೆ ಗೌರವಪೂರ್ವಕವಾಗಿದೆ.

ಪ್ರತಿಯೊಂದು ವರ್ಷ ನನಗೆ ಪ್ರೀತಿ ಮತ್ತು ಬೆಂಬಲ ನೀಡಿದ್ದಕ್ಕೆ ವಿಶೇಷ ಧನ್ಯವಾದಗಳು. ನಾನು ಟೆಸ್ಟ್ ಕ್ರಿಕೆಟ್‌ ನಿವೃತ್ತಿ ಘೋಷಿಸಿದರೂ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸುತ್ತೇನೆ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.

Related Articles

Latest Articles