Friday, June 27, 2025

ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಜೀವಾಂತ್ಯ

ಶಿವಮೊಗ್ಗ: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ನಡೆದಿದೆ.

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ಮನುಷ್ ಡಿ (19) ಮೃತ ದುರ್ದೈವಿ.‌

ಇತ್ತೀಚೆಗೆ ನಡೆದಿದ್ದ ಸೆಮಿಸ್ಟರ್​ ಪರೀಕ್ಷೆಯಲ್ಲಿ ಆಂಗ್ಲ ವಿಷಯದಲ್ಲಿ ಅನುತ್ತೀರ್ಣನಾಗಿದ್ದ. ಇದರಿಂದ ಬೇಸತ್ತು ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸದಲ್ಲಿ ಕಳೆನಾಶಕ ಸೇವಿಸಿದ್ದಾನೆ. ವಿಷಯ ತಿಳಿದ ಕೂಡಲೇ ವಿದ್ಯಾರ್ಥಿ ಮನುಷ್​ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Latest Articles