Wednesday, July 16, 2025

ಮುರುಘಾ ಶ್ರೀಗಳಿಗೆ ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್‌ ನೀಡಿದ್ದ ಜಾಮೀನು ರದ್ದುಗೊಳಿಸಿ ಸರ್ವೋಚ್ಛ ನ್ಯಾಯಾಲಯ ಆದೇಶಿಸಿದೆ. ಮುಂದಿನ ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿ ಮುರುಘಾ ಶ್ರೀಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಈ ಹಿಂದೆ ಮುರುಘಾ ಶ್ರೀಗಳಿಗೆ ಕರ್ನಾಟಕ ಹೈಕೋರ್ಟ್‌ ಷರತ್ತುಬದ್ಧ ಜಾಮೀಜು ನೀಡಿತ್ತು. ಇವರು ಜೈಲಿನಿಂದ ಹೊರಗೆ ಇದ್ದರೆ ಸಾಕ್ಷ ನಾಶ ಮಾಡಬಹುದು ಎಂದು ರಾಜಪ್ಪ ಎಂಬುವರು ಸುಪ್ರೀಂ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೊಸ ಆದೇಶ ಹೊರಡಿಸಿದೆ. ನ್ಯಾ. ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿ ಜಾಮೀನು ರದ್ದುಗೊಳಿಸಿದೆ.

ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಶ್ರೀಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ 2 ತಿಂಗಳ ಕಾಲ ವಿಸ್ತರಣೆ ಮಾಡಬಹುದು. ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ಮುರುಘಾ ಶ್ರೀ 1 ವಾರದೊಳಗೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು.

Related Articles

Latest Articles