Wednesday, February 19, 2025

ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ ವಿಸ್ತರಣೆ: 2 ತಿಂಗಳಲ್ಲಿ ನಿರ್ಧರಿಸಲು ಹೈಕೋರ್ಟ್ ಸೂಚನೆ

ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಖಾಸಗಿ ಬಸ್ ಗಳಿಗೂ ಶಕ್ತಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ.

ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್ ಶೆಟ್ಟಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿ, ಶಕ್ತಿ ಯೋಜನೆ ಜಾರಿಯಾಗಿ ಖಾಸಗಿ ಬಸ್ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಈ ಯೋಜನೆಯನ್ನು ಖಾಸಗಿ ಬಸ್ ಗಳಿಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದರು.

Related Articles

Latest Articles