ಶಿವಮೊಗ್ಗ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪದ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾಳೆ. ಭೂಮಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಭೂಮಿಕಾ ಸಿರಿವಂತೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.