Tuesday, July 23, 2024

ಹಾಡಹಗಲೇ ಗ್ಯಾಂಗ್​ವಾರ್: ಇಬ್ಬರು ಯುವಕರ ಬರ್ಬರ ಹತ್ಯೆ

ಲೋಕಸಭಾ ಚುನಾವಣೆ ಮತದಾನ ಮುಗಿದ ಮಾರನೇ ದಿನವಾದ ಇಂದು(ಮೇ.08) ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾಗಿದೆ. ಗೌಸ್(30) ಮತ್ತು ಶೋಹೆಬ್(35) ಕೊಲೆಯಾದ ಯುವಕರು. ಹಳೆಯ ವೈಷಮ್ಯ ಹಿನ್ನೆಲೆ, ಇಬ್ಬರ ಹತ್ಯೆ ನಡೆದಿರುವ ಶಂಕೆಯಿದ್ದು, ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಮೃತ ರೌಡಿ ಶೀಟರಗಳು, ಮತ್ತೋರ್ವ ರೌಡಿಶೀಟರ್ ಆದ ಯಾಸೀನ್ ಖುರೇಷಿ ಮೇಲೆ ಹಲ್ಲೆ ಮಾಡಲು ಬಂದಿದ್ದರು. ಈ ವೇಳೆ ಯಾಸೀನ್ ಖುರೇಷಿ ಕಡೆಯವರು ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ರೌಡಿಶೀಟರ್ ಯಾಸೀನ್ ಖುರೇಷಿಗೆ ಗಾಯವಾಗಿದ್ದು, ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್ಆರ್​ ತುಕಡಿ ನಿಯೋಜನೆ ಮಾಡಲಾಗಿದೆ.

Related Articles

Latest Articles