ಹಾಸನ: ಹಾವು ಕಡಿತಕ್ಕೆ ಯುವಕನೊಬ್ಬ (snake bite) ಬಲಿಯಾಗಿದ್ದಾನೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ದೇವರಗುಡ್ಡೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಅಭಿಲಾಷ್ (27) ಸಾವನ್ನಪ್ಪಿದ ಯುವಕ. ನಿನ್ನೆ ರಾತ್ರಿ ತೋಟಕ್ಕೆ ನೀರು ಹಾಯಿಸಲು ಹೋಗಿದ್ದಾಗ ಹಾವು ಕಡಿತ ಸಂಭವಿಸಿದೆ.
ಕೂಡಲೇ ಹೊಳೆನರಸೀಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದರೂ ಫಲಕಾರಿಯಾಗಲಿಲ್ಲ.
ಅಭಿಲಾಷ್ ಹೈನುಗಾರಿಕೆ ಹಾಗೂ ತೋಟ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಳ್ಳಿ ಮೈಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.