ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರು ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮತ್ತೆ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ.
ಹಿಂದೂ ಧರ್ಮ ಎಂಬುದು ಮೋಸ. ಸುಪ್ರೀಂ ಕೋರ್ಟ್ ಸಹ ಇದನ್ನೇ ಹೇಳಿದೆ ಎಂದು ಹೇಳಿದ್ದಾರೆ. “ಹಿಂದೂ ಧರ್ಮ ಏಕ್ ಧೋಖಾ ಹೈ(ಹಿಂದೂ ಎಂಬುದು ಮೋಸ)” ಎಂದು ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದು, ಸುಪ್ರೀಂ ಕೋರ್ಟ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ. ಹಿಂದೂ ಧರ್ಮ ಒಂದು ಧರ್ಮವಲ್ಲ, ಅದು ಕೇವಲ “ಜೀವನ ವಿಧಾನ” ಎಂದು ಎಸ್ಪಿ ನಾಯಕ ಹೇಳಿದ್ದಾರೆ. ಮೋಹನ್ ಭಾಗವತ್ ಕೂಡ ಒಂದಲ್ಲ ಎರಡೆರಡು ಬಾರಿ ಹಿಂದೂ ಎನ್ನುವುದು ಧರ್ಮವಲ್ಲ, ಜೀವನ ವಿಧಾನ ಎಂದು ಹೇಳಿದ್ದರು.
ಪ್ರಧಾನಿ ನರೇಂದ್ರ ಮೋದಿ ಕೂಡ ಹಿಂದೂ ಧರ್ಮ ಒಂದು ಧರ್ಮವಲ್ಲ ಎಂದು ಹೇಳಿದ್ದಾರೆ. ಅವರು ಇಂತಹ ಹೇಳಿಕೆ ನೀಡಿದಾಗ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ. ಆದರೆ ಸ್ವಾಮಿ ಪ್ರಸಾದ್ ಮೌರ್ಯ ಅದನ್ನು ಹೇಳಿದರೆ, ಅಶಾಂತಿಗೆ ಕಾರಣವಾಗುತ್ತದೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ” ಎಂದು ವಾಗ್ದಾಳಿ ನಡೆಸಿದ್ದಾರೆ.